ಗೃಹ ರಕ್ಷಕ ದಳದ ಸದಸ್ಯ ಸ್ಥಾನಗಳ ನೋಂದಣಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಗೃಹ ರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 194 ಸ್ವಯಂ ಸೇವಕ ಗೃಹ ರಕ್ಷಕ ಸದಸ್ಯ ಸ್ಥಾನಗಳಿಗೆ ನೋಂದಣಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಎಲ್ಲಾ ತಾಲೂಕಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಗೃಹ ರಕ್ಷಕ ದಳದ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 9 ರಂದು ಸಂಜೆ 4 ಗಂಟೆಯೊಳಗೆ ಸಲ್ಲಿಸಬೇಕು.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: 32 ಆರೋಪಿಗಳು ಖುಲಾಸೆ

ವಿವಾದಕ್ಕೆ ಸಂಬಂಧಿಸಿದಂತೆ ಆಪಾದಿತ ಎಲ್ಲಾ 32 ಮಂದಿ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಈ ಮೂಲಕ ಕೋರ್ಟ್ ನೀಡಿದ ಈ ತೀರ್ಪು ನಿಂದಾಗಿ 28 ವರ್ಷಗಳ ಸುದೀರ್ಘ ಪ್ರಕರಣಕ್ಕೆ ತೆರೆ ಎಳೆದಂತಾಗಿದೆ. ಹಾಗೇ ಪ್ರಕರಣದ ಪ್ರಮುಖ ದೋಷಿಗಳಾದ ಅಡ್ವಾಣಿ, ಉಮಾಭಾರತಿ, ಮುರುಳಿ ಮನೋಹರ್ ಜೋಷಿ ಸೇರಿದಂತೆ ಇತರರು ನಿರಾಳರಾಗಿದ್ದಾರೆ.

ಕುರಿ ಮತ್ತು ಮೇಕೆಗಳ ಅನುಗ್ರಹ ಯೋಜನೆ ಮುಂದುವರೆಸಲು ಮನವಿ

ಕುರಿಗಾರರಿಗೆ ಅನುಕೂಲಕರವಾಗಿದ್ದ ಅನುಗ್ರಹ ಯೋಜನೆಯನ್ನು ಮುಂದುವರೆಸಬೇಕು. ಜೊತೆಗೆ ಯೋಜನೆಯಡಿ ಬಾಕಿ ಇರುವ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಯುವ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ದಯಾಮರಣ ಕೋರಿ ಡಿಸಿಗೆ ಲಕ್ಷ್ಮೇಶ್ವರದ ಮಾಜಿ ಸೈನಿಕ ಮನವಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೇಹೊಸೂರು ಗ್ರಾಮದ ಮಾಜಿ ಸೈನಿಕ ಈರಣ್ಣ ಅಣ್ಣಿಗೇರಿ ತಮಗೆ ದಯಾಮರಣ ನೀಡುವಂತೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಶಾಲಾ ಕಟ್ಟಡ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ಆರೋಪ: ಕ್ರಮಕ್ಕೆ ಜೆಡಿಎಸ್ ವಿದ್ಯಾರ್ಥಿ ಘಟಕ ಒತ್ತಾಯ

ತಾಲೂಕಿನ ಕೊಂಡಿಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಕಳಪೆ ಮಟ್ಟದ್ದಾಗಿದ್ದು, ಅದನ್ನು ತಡೆಗಟ್ಟಬೇಕೆಂದು ಜಾತ್ಯಾತೀತ ಜನತಾದಳ ವಿದ್ಯಾರ್ಥಿ ಘಟಕದಿಂದ ಉಪ‌ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಶಿರಹಟ್ಟಿ: ನೂತನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಉದ್ಘಾಟನೆ

ಕಳೆದ ಹತ್ತು ತಿಂಗಳಿನಿಂದ ನೆನೆಗುದಿಗೆ ಬಿದಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕಾ ನೂತನ ಕೇಂದ್ರ ಕಚೇರಿಯನ್ನು ಮಂಗಳವಾರ ಶಾಸಕ ರಾಮಣ್ಣ ಲಮಾಣಿ ಉದ್ಘಾಟಿಸಿದರು.

ಪ್ರತಾಪಗೌಡ ಪಾಟೀಲ ಉಪ ಚುನಾವಣೆಯಲ್ಲಿ ಗೆದ್ದರೆ ಸಚಿವ ಸ್ಥಾನ

ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ವಿರುದ್ಧ ಹೈಕೋರ್ಟಿನಲ್ಲಿ ದಾಖಲಾಗಿದ್ದ ಚುನಾವಣೆ ತಕರಾರು ಅರ್ಜಿ ವಜಾಗೊಂಡಿದೆ. ಇದೀಗ ಪ್ರತಾಪಗೌಡ ಅವರು ಉಪ ಚುನಾವಣೆಯಲ್ಲಿ ಜಯಶಾಲಿ ಆದರೆ ಸಚಿವ ಸ್ಥಾನ ಸಿಗಲಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.

ಹುಲ್ಲೂರಿನಲ್ಲಿ ಮಳೆಯ ಆರ್ಭಟ: ಧರೆಗುರುಳುತ್ತಿವೆ ಮನೆ-ಮರಗಳು

ಕಳೆದ ಎರ್ಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆ ಹಾಗೂ ಮರಗಳು ಧರೆಗುರುಳುತ್ತಿವೆ. ಇದರಿಂದ ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರು ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ.

ಗಜೇಂದ್ರಗಡ : ಚಿಕ್ಕಪ್ಪನ ಅಂತ್ಯಕ್ರಿಯೆ ವೇಳೆ ಹೃದಯಾಘಾತದಿಂದ ಮಗ ಸಾವು

ಸ್ಮಶಾನದಲ್ಲಿ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಇನ್ನೇನು ಕೆಲ ಕ್ಷಣದಲ್ಲಿ ಅಂತ್ಯಕ್ರಿಯೇ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದೆ ಬೇರೆ. ವೃದ್ಧ ಅಡಿವೆಪ್ಪ ಮೇಟಿ ಸಾವಿನಿಂದ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಸ್ಮಶಾನದಲ್ಲಿ ಇನ್ನೇನು ಅಂತಿಮ ವಿಧಿವಿಧಾನಗಳು ನಡೆದಿದ್ದವು. ಆದರೆ ಆ ವೇಳೆ ಚಿಕ್ಕಪ್ಪನ ಅಂತ್ಯಕ್ರಿಯೇಗೆ ಬಂದಿದ್ದ ಮಗ ಹೃದಯಾಗಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಮೂಲಕ ಮೊದಲೇ ಶೋಕದಲ್ಲಿ ಮುಳಗಿದ ಕುಟುಂಬಕ್ಕೆ ಮತ್ತೊಂದು ಶೋಕ ಆವರಿಸಿದೆ.

ಸದ್ಯ ಶಾಲೆ ಪ್ರಾರಂಭಿಸುವ ಯೋಚನೆ ಸರ್ಕಾರದ ಮುಂದಿಲ್ಲ: ಸಚಿವ ಸುರೇಶ್ ಕುಮಾರ್

ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

I Love You ಅಂತಹೇಳಿದ್ದ ಗೆಳೆಯಾಗ ಗೆಳತಿ ಕೊಟ್ಟಿದ್ದೇನು ಗೊತ್ತಾ..?

ತನ್ನ ಭಾಳ್ ದಿನದ್ ಗೆಳತಿಗೆ ಆತ, ಐಲೌಯು ಅಂತ ಹೇಳಬೇಕು ಅಂದ್ಕೊಂಡಿದ್ನಂತ. ಆದ್ರ ಅವನಿಗೊಂದು ಹುಚ್ಚು. ತಾನು ಐಲೌಯು ಅಂತ ಹೇಳಿದ್ ಕೂಡ್ಲೆ ತನ್ನ ಗೆಳತಿಗೆ ಫುಲ್ ಥ್ರಿಲ್ ಆಗಬೇಕು. ಆಕಿ ಜೀವನದಾಗ ಈ ಘಟನಾ ಮರಿಲಾರದಂತ ಅನುಭವ ಆಗಬೇಕು. ಅಂಥ ಸರ್ಪ್ರೈಜ್ ಕೊಡಬೇಕು ಅನ್ನೋ ಖಯಾಲಿಯೊಳಗ ಒಂದು ಪ್ಲ್ಯಾನ್ ಮಾಡಿದ್ನಂತ. ಐಲೌಯು ಅಂತ ಹೇಳಿದ್ ಕೂಡ್ಲೆ ಮುಂದೇನಾತು ಅನ್ನೋದಾ ಆತ ಮಾಡಿದ ಪ್ಲ್ಯಾನ್ ನ ಕಥಿ ನೋಡ್ರಿ..

ಪೊಲೀಸರ ಮೂಲಕ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಫೋನ್ ಟ್ರ್ಯಾಪ್

ಪೊಲೀಸರ ಮೂಲಕ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಫೋನ್ ಟ್ರ್ಯಾಪ್ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೊನರೆಡ್ಡಿ ಗಂಭೀರವಾದ ಆರೋಪ ಮಾಡಿದರು.