ಬೆಂಗಳೂರು: ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಇಂದು ಲಸಿಕೆಗೋಸ್ಕರ ಬಿಕ್ಷೆ ಬೇಡುತ್ತಿದ್ದೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಶಾಸಕ ರಾಮದಾಸ್ ಡೀಕಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಂದು ಲಸಿಕೆ ಬಗ್ಗೆ ತಪ್ಪು ಕಲ್ಪನೆ ಬರುವ ರೀತಿಯಲ್ಲಿ ಮಾತನಾಡಿದ ನೀವು ಇಂದು ಲಸಿಕೆಗೋಸ್ಕರ ಭಿಕ್ಷೆ ಬೇಡ್ತಿವಿ ಎಂದು ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಹಾಗೂ ಇವೆಲ್ಲವನ್ನು ರಾಜ್ಯದ ಜನ ವೀಕ್ಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಡಿ.ಕೆ ಶಿವಕುಮಾರ್ ಅವರೇ ಒಂದು ಲಸಿಕೆ ಬರುತ್ತದೆ ಎಂದರೆ ಅದನ್ನು ಹಲವು ಬಾರಿ ಪರೀಕ್ಷೆ ಮಾಡಿರುತ್ತಾರೆ, ಆ ಪರೀಕ್ಷೆಗಳಲ್ಲಿ ಯಶಸ್ವಿಯಾದಾಗ ಮಾತ್ರ ಮಾನವ ಪ್ರಯೋಗ ಮಾಡುತ್ತಾರೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ನೀಡಿದಕ್ಕಾಗಿಯೇ ಇಂದು ಅವರು ಕೊರೊನಾ ಸೋಂಕಿಗೆ ತುತ್ತಾಗದೆ ಲಕ್ಷಾಂತರ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, ನಿಮ್ಮ ಹೇಳಿಕೆಗಳನ್ನು ರಾಜ್ಯದ ಜನರು ವೀಕ್ಷಿಸುತ್ತಿದ್ದಾರೆ ಎಂದು ನೋಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ನಾಡಿನ ಸಂಸ್ಕೃತಿ ಉಳಿಸಿ ಬೆಳಸುವಲ್ಲಿ ಕಸಾಪ ಮಹತ್ವ ಪಾತ್ರ ಹೊಂದಿದೆ

ಪಟ್ಟಣದಲ್ಲಿ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನಿಂದ 300ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಹೊಸ ಭಾಷ್ಯ ಬರೆದಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಹೇಳಿದರು.

ಜಿಲ್ಲೆಯಲ್ಲಿ ಮೂವರಿಗೆ ಸೋಂಕು ದೃಢ

ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೊರೊನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿದ್ದು, ನಾಲ್ವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.