ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್‌ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ(ಜೂನ್ 7)ಒಂದು ವರ್ಷವಾಗಿದೆ. ಕಳೆದ ವರ್ಷ ಇದೇ ದಿನ ಇದ್ದಕ್ಕಿದ್ದಂತೆ ಅವರು ಹೃದಯಾಘಾತದಿಂದ ನಿಧನರಾಗಿ ಅವರ ಕುಟುಂಬದವರನ್ನು, ಅಭಿಮಾನಿಗಳನ್ನು ದುಃಖದ ಸಾಗರದಲ್ಲಿ ಮುಳುಗಿಸಿದ್ದರು.

ಅವರ ಪತ್ನಿ ನಟಿ ಮೇಘನಾ ಸರ್ಜಾ, ತಮ್ಮ ನಟ ಧ್ರುವ ಸರ್ಜಾ ಸೇರಿದಂತೆ ಹಲವರು ಭಾವುಕ ಪತ್ರ ಬರೆದು ಸ್ಮರಿಸಿಕೊಂಡಿದ್ದಾರೆ. ನೀನು ದೇವರ ಮನೆಗೆ ಹೋಗಿ ಒಂದು ವರುಷವಾಯಿತು. ಎಷ್ಟು ಬೇಗ ಒಂದು ವರ್ಷ, ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರುತ್ತಿದ್ದ ಪ್ರೀತಿ, ಪ್ರೇಮ, ಸ್ನೇಹ ಉದಾರಗುಣ ಮತ್ತು ಅಜಾತ ಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದಿಗೂ ನಿನ್ನ ನೆನಪಿನಲ್ಲೇ, ನಿನ್ನ ಪ್ರೀತಿಯ ಕುಟುಂಬ ಎಂದು ಇಡೀ ಕುಟುಂಬ ಭಾವುಕ ಪತ್ರವನ್ನು ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಜಯ ಕಾಂಗ್ರೇಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಉತ್ತರಪ್ರಭ ಲಕ್ಷ್ಮೇಶ್ವರ: ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್…

ಮಸ್ಕಿ: ಬಂಜಾರ ಭವನ ನಿರ್ಮಾಣಕ್ಕೆ 2ಕೋಟಿ ಮಂಜೂರು

ತಾಲೂಕ ಬಂಜಾರ ಭವನ ನಿರ್ಮಾಣಕ್ಕೆ 2ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಭರವಸೆ ನೀಡಿದರು.

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.